ಜುಲೈ 09ರಿಂದ ಮದ್ಯ ಮಾರಾಟ ಬಂದ್ ➤ ಮದ್ಯ ಮಾರಾಟಗಾರರ ಒಕ್ಕೂಟ ಎಚ್ಚರಿಕೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 07. ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ರಾಜ್ಯ ಸರಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್. ಗುರುಸ್ವಾಮಿ ಎಚ್ಚರಿಸಿದ್ದಾರೆ.


ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿದ್ದು, ಸಮಯಕ್ಕೆ ಸರಿಯಾಗಿ ಮದ್ಯ ಸಿಗದೇ ಬಾರ್ ಮಾಲಿಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಯಾಕೆ ಹೀಗೆ ಗೋಳು ಹೊಯ್ಕೋತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಈ ಮೊದಲು KSBCL ಅಕೌಂಟ್ ಗೆ ಹಣ ಹಾಕಿದ ಕೂಡಲೇ ಬೇಕಾದ ಮದ್ಯ ಸುಲಭವಾಗಿ ಸಿಗುತ್ತಿತ್ತು. ಆದರೆ ಇತ್ತೀಚೆಗೆ ವೆಬ್ ಇಂಡೆಂಟಿಂಗ್ ವ್ಯವಸ್ಥೆ ಆರಂಭವಾದಾಗಿನಿಂದ ಸಗಟು ಮದ್ಯ ಖರೀದಿದಾರರು ಸಂಕಷ್ಟಕ್ಕೊಳಗಾಗಿದ್ದಾರೆ. ಮುಂದಿನ 24 ಗಂಟೆಗಳ ಒಳಗೆ ಮದ್ಯ ಖರೀದಿ ಇಂಡೆಂಟಿಂಗ್ ವ್ಯವಸ್ಥೆಯನ್ನು ಸರಿಪಡಿಸಬೇಕು, ಇಲ್ಲವಾದಲ್ಲಿ ಮದ್ಯ ಮಾರಾಟವನ್ನು ನಿಲ್ಲಿಸಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Also Read  ಬಾಜಿನಡ್ಕ-ಕರಿಂಬಿ-ಬನ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ

error: Content is protected !!
Scroll to Top