ಇಂದಿನಿಂದ ಸಿದ್ದರಾಮಯ್ಯ ನೇತೃತ್ವದ ಕೊನೆಯ ಚಳಿಗಾಲದ ಅಧಿವೇಶನ ► ಅಧಿವೇಶನಕ್ಕೆ ಕುಂದಾನಗರಿಯ ಸುವರ್ಣ ಸೌಧ ಸಜ್ಜು

(ನ್ಯೂಸ್ ಕಡಬ) newskadaba.com ಬೆಳಗಾವಿ ನ.13. ಇಂದಿನಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನಕ್ಕಾಗಿ ಬೆಳಗಾವಿಯ ಸುವರ್ಣಸೌಧ ಸಜ್ಜಾಗಿದೆ.

ಈ ಬಾರಿಯ ಅಧಿವೇಶನದಲ್ಲಿ  ಕಾಂಗ್ರೆಸ್‌ ಸರ್ಕಾರದ ಸಾಧನೆ -ವೈಫ‌ಲ್ಯ ಕುರಿತು ಆರೋಪ -ಪ್ರತ್ಯಾರೋಪಗಳ ಸುರಿಮಳೆಯೇ ಹರಿದಾಡುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಕೊನೆಯ ಅಧಿವೇಶನ ಇದಾಗಿದೆ. ಪ್ರತಿಪಕ್ಷಗಳು ವೈಫ‌ಲ್ಯಗಳ ಪಟ್ಟಿಯೊಂದಿಗೆ ಮುಗಿಬೀಳಲು ಸಜ್ಜಾಗಿದ್ದರೆ, ಸಾಧನೆಗಳ ಅಸ್ತ್ರ ಪ್ರಯೋಗಿಸಿ ತಿರುಗೇಟು ನೀಡಲು ಕಾಂಗ್ರೆಸ್‌ ಸಿದ್ಧತೆ ನಡೆಸಿದೆ.

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಜಾರ್ಜ್‌ ರಾಜೀನಾಮೆಗೆ ಒತ್ತಾಯಿಸಿ ಅಧಿವೇಶನದಲ್ಲಿ ಹೋರಾಟ ನಡೆಸುವುದಾಗಿ ಬಿಜೆಪಿ ಈಗಾಗಲೇ ಘೋಷಿಸಿದೆ. ನೀರಾವರಿ ಯೋಜನೆ ಸೇರಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ, ಕಳಸಾ-ಬಂಡೂರಿ ನಾಲಾ ಯೋಜನೆ ವಿವಾದ, ಕಬ್ಬು ಬೆಳೆಗಾರರ ಸಮಸ್ಯೆ ಈ ಬಾರಿಯೂ ಅಧಿವೇಶನದಲ್ಲಿ ಚರ್ಚೆಗೆ ಬರಲಿದೆ. 8ನೇ ಚಳಿಗಾಲ ಅಧಿವೇಶನಕ್ಕೆ ಜಿಲ್ಲಾಡಳಿತ ಮತ್ತು ನಗರ ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಅಧಿವೇಶನಕ್ಕೆ ಆಗಮಿಸುವ ಗಣ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಜಿಲ್ಲಾಡಳಿತದಿಂದ ಊಟ, ವಸತಿ, ವಾಹನ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳ ಸಿದ್ಧತೆ ಮಾಡಲಾಗುತ್ತಿದೆ.

ಅಧಿವೇಶನಕ್ಕೆ ಆಗಮಿಸುವವರಿಗೆ ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಹೋಟೆಲ್ ರೂಮ್’ಗಳನ್ನು ಬುಕ್ ಮಾಡಲಾಗಿದೆ. ರೈತರು, ಖಾಸಗಿ ವೈದ್ಯರ ಸಂಘ, ಮಾದಿಗ ಮೀಸಲಾತಿ ಹೋರಾಟ ಸಮಿತಿ ಸೇರಿ 40ಕ್ಕೂ ಅಧಿಕ ಸಂಘಟನೆಗಳಿಂದ ಪ್ರತಿಭಟನೆಗಳು ನಡೆಯಲಿವೆ.

error: Content is protected !!

Join the Group

Join WhatsApp Group