ರಾಜ್ಯದಲ್ಲಿ ಭಾರೀ ಮಳೆಯ ಹಿನ್ನೆಲೆ ➤ ದ.ಕ. ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜು.10. ರಾಜ್ಯದ ವಿವಿಧೆಡೆ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.







ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ (ಜುಲೈ 11 ಸೋಮವಾರ) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದ್ದು, ಪಿಯು, ಪದವಿ ಹಾಗೂ ಇನ್ನಿತರ ವೃತ್ತಿಪರ ಸಂಸ್ಥೆಗಳಿಗೆ ಎಂದಿನಂತೆ ತರಗತಿ ನಡೆಯಲಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ‌.






 

 

error: Content is protected !!
Scroll to Top