ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮನೆಗಳಿಗೆ ನುಗ್ಗಿದ ನೀರು ➤‌ ತಕ್ಷಣವೇ ಸ್ಪಂದಿಸಿದ ಪಂಚಾಯತ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಜು.11. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮನೆಗೆ ನೀರು ನುಗ್ಗಿದ್ದರಿಂದ ಸಂಭವಿಸಬಹುದಾಗಿದ್ದ ಅಪಾಯವನ್ನು ಪಟ್ಟಣ ಪಂಚಾಯತ್ ಅಧಿಕಾರಿಗಳು ಬಗೆಹರಿಸಿಕೊಟ್ಟು ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಲ್ಲಂತಡ್ಕ, ಮುಂಡ್ರೊಟ್ಟು ಪರಿಸರದಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದ್ದು, ವಿಷಯ ಅರಿತ ಕೂಡಲೇ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಫಕೀರ ಮೂಲ್ಯರ ಸೂಚನೆಯಂತೆ ಹರೀಶ್ ಬೆದ್ರಾಜೆ ಸ್ಥಳಕ್ಕೆ ಭೇಟಿ ನೀಡಿ ಜೆಸಿಬಿ ತರಿಸಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read   ಬಂಟ್ವಾಳ: ಯುವ ವಕೀಲರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್ !! ➤  3 ಲಕ್ಷ ಪರಿಹಾರ ಕೊಡುವಂತೆ ಸೂಚನೆ..!

 

 

error: Content is protected !!
Scroll to Top