ಕಡಬ: ಸಂಪೂರ್ಣ ಹದಗೆಟ್ಟ ರಸ್ತೆ ➤ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 11. ಮದ್ಯಡ್ಕ-ಬೊಲ್ಲೆಕುಕ್ಕು ರಸ್ತೆ ಸಂಪೂರ್ಣ ಹದಗೆಟ್ಟ ಪರಿಣಾಮ ಸುಮಾರು 35ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕ ಕಡಿತವಾಗಿದ್ದರಿಂದ ಗ್ರಾಮಸ್ಥರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ 1.5 ಕಿ.ಮೀ ರಸ್ತೆ ಕಳೆದ 35 ವರ್ಷಗಳಿಂದ ದುರಸ್ಥಿಯಾಗದೇ ಇದ್ದು, ಗ್ರಾಮಸ್ಥರು ಪರದಾಡುವಂತಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಬೇಡಿಕೆ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗದೇ ಇದ್ದುದರಿಂದ ಗ್ರಾಮಸ್ಥರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

Also Read  ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

error: Content is protected !!
Scroll to Top