ಶಿರಾಡಿ, ಆಗುಂಬೆ, ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸ್ಥಗಿತ ಹಿನ್ನೆಲೆ ➤ ಮಂಗಳೂರು- ಬೆಂಗಳೂರು ಹೆಚ್ಚುವರಿ ರೈಲಿಗೆ ಬೇಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್‌ ಮತ್ತು ಪರ್ಯಾಯ ರಸ್ತೆಗಳಾದ ಚಾರ್ಮಾಡಿ, ಸಂಪಾಜೆ, ಆಗುಂಬೆ ರಸ್ತೆಗಳಲ್ಲಿ ಭೂಕುಸಿತ ಉಂಟಾಗಿ ಮಂಗಳೂರು- ಬೆಂಗಳೂರು ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಆತಂಕವಿದೆ. ಇದಕ್ಕೆ ಪರ್ಯಾಯವಾಗಿ ರೈಲು ಸಂಚಾರ ಅವಲಂಬಿಸಬೇಕಾದ ಅನಿವಾರ್ಯತೆ ಸೃಷ್ಠಿಯಾಗಿದ್ದು, ಈ ನಿಟ್ಟಿನಲ್ಲಿ ಮಂಗಳೂರು- ಬೆಂಗಳೂರು ನಡುವೆ ಈಗಿರುವ ರೈಲುಗಳ ಹೊರತಾಗಿ ಹೆಚ್ಚುವರಿ ರೈಲುಗಳನ್ನು ಓಡಿಸಬೇಕೆಂಬ ಆಗ್ರಹ ಸಾರ್ವಜನಿಕರಿಂದ ಕೇಳಿಬರುತ್ತಿದೆ.

ಇದೇ ವೇಳೆ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು, ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಹೊಸದಿಲ್ಲಿಯಲ್ಲಿ ಭೇಟಿಯಾಗಿ ಮಂಗಳೂರು- ಬೆಂಗಳೂರು ಮಧ್ಯೆ ಹೆಚ್ಚುವರಿ ರೈಲುಗಳನ್ನು ಆರಂಭಿಸುವಂತೆ ಮನವಿ ಮಾಡಿದ್ದಾರೆ. ಮಂಗಳೂರು- ಬೆಂಗಳೂರು ನಡುವೆ ದಿನಂಪ್ರತಿ ಸುಮಾರು 10,000 ಜನರು ಪ್ರಯಾಣಿಸುತ್ತಿದ್ದಾರೆ. ಇದೀಗ ಸಂಪರ್ಕ ಮಾರ್ಗಗಳಾದ ಶಿರಾಡಿ, ಚಾರ್ಮಾಡಿ, ಸಂಪಾಜೆ ಘಾಟ್ ಪ್ರದೇಶಗಳಲ್ಲಿನ ರಸ್ತೆಗಳಲ್ಲಿ ಸಂಚಾರಕ್ಕೆ ತಡೆ ಉಂಟಾದ ಹಿನ್ನೆಲೆ ರೈಲು ಸಂಚಾರ ಪ್ರಮುಖ ಸಂಪರ್ಕವಾಗಿದೆ. ಹಾಗಾಗಿ ಮಂಗಳೂರು- ಬೆಂಗಳೂರು ಮಧ್ಯೆ ಹಗಲು ಮತ್ತು ರಾತ್ರಿ ವೇಳೆಯಲ್ಲಿ ಒಂದೊಂದು ಹೆಚ್ಚುವರಿ ರೈಲು ಸಂಚಾರ ಆರಂಭಿಸಬೇಕೆಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಆಶ್ವಾಸನೆ ನೀಡಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

Also Read  ಹೊಸ ಸ್ಮಾರ್ಟ್​​​ವಾಚ್​ ಲಾಂಚ್ ಮಾಡಿದ ಫಾಸ್ಟ್ರಾಕ್​ ಕಂಪೆನಿ​ !

error: Content is protected !!
Scroll to Top