ಬೆಳ್ತಂಗಡಿ: ಚಿನ್ನಾಭರಣಕ್ಕಾಗಿ ಒಂಟಿ ವೃದ್ದೆಯ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 23. ಮನೆಯಲ್ಲಿದ್ದ ಒಂಟಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೈಮೇಲಿದ್ದ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದೋಚಿದ ಘಟನೆ ಇಂದು ಮಧ್ಯಾಹ್ನ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85) ಎಂದು ಗುರುತಿಸಲಾಗಿದೆ. ಅಕ್ಕು ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗಳ ಜೊತೆ ವಾಸವಿದ್ದರು. ಮಗ ಮತ್ತು ಸೊಸೆ ಕೆಲಸದ ನಿಮಿತ್ತ ಹೊರಗಡೆ ಹೋಗಿದ್ದು, ಇಂದು ಶನಿವಾರವಾದ ಕಾರಣ ಮಧ್ಯಾಹ್ನ ಮೊಮ್ಮಗಳು ಶಾಲೆ ಬಿಟ್ಟು ಮನೆಗೆ ಬಂದು ಅಜ್ಜಿಯನ್ನು ಕರೆದಾಗ, ಅಜ್ಜಿ ಮನೆಯಲ್ಲಿ ಇರಲಿಲ್ಲ. ಈ ವೇಳೆ ಹುಡುಕಾಡಿದಾಗ ಮನೆಯ ಹಿಂಭಾಗ ಅಜ್ಜಿ ಗಂಭೀರ ಗಾಯಗೊಂಡು ಬಿದ್ದಿದ್ದರು. ತಕ್ಷಣವೇ ಮೊಮ್ಮಗಳು ಪೋಷಕರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾಳೆ. ಅವರು ಬಂದು ನೋಡಿದಾಗ ಅಕ್ಕು ಅವರು ಮೃತಪಟ್ಟಿದ್ದು, ಅವರ ಕಿವಿಯಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು ಮನೆಯಲ್ಲಿದ್ದ ನಗದನ್ನು ದರೋಡೆಗೈದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕಾಟಿಪಳ್ಳ: ಬ್ಲಡ್ ಹೆಲ್ಪ್ ಕೇರ್ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

error: Content is protected !!
Scroll to Top