ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವು



(ನ್ಯೂಸ್ ಕಡಬ) newskadaba.com ಕೊಡಗು, ಜು. 25. ಇಲ್ಲಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಮೃತಪಟ್ಟ ಘಟನೆ ವರದಿಯಾಗಿದೆ.





ನೆಲ್ಯಹುದಿಕೇರಿ ಗ್ರಾಮದ ಪ್ರಕಾಶ್ ಹಾಗೂ ಸುಮನ್ ಚಂಗಪ್ಪ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ 11 ಕೆ.ವಿ ಸಾಮರ್ಥ್ಯದ ವಿದ್ಯುತ್ ತಂತಿಗಳು ಹಾದುಹೋಗಿದ್ದು, ಇದರ ಮೇಲೆ ಮರದ ಕೊಂಬೆ ಬಿದ್ದಿದ್ದರಿಂದ ತಂತಿ ಕೆಳಕ್ಕೆ ಬಾಗಿವೆ‌. ತೋಟದಲ್ಲಿ ಕಾಡಾನೆಗಳು ಹಾದು ಹೋಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಇದರಿಂದಾಗಿ ಎರಡು ಆನೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಸ್ಥಳಕ್ಕೆ ಅರಣ್ಯ‌ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.






error: Content is protected !!
Scroll to Top