ನಾಳೆ (ಜು. 26) ದಿನ ಪೂರ್ತಿ ವಿದ್ಯುತ್ ಕಡಿತ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 25. ತುರ್ತು ನಿರ್ವಹಣಾ ಕೆಲಸಗಳು ಬಾಕಿಯಿರುವ ಹಿನ್ನೆಲೆ ನಾಳೆ (ಜು. 26) ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಇಡೀ ದಿನ ಕರೆಂಟ್ ಕಡಿತ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೆಸ್ಕಾಂ ಸುಳ್ಯ ವಿಭಾಗ ವ್ಯಾಪ್ತಿಯ 33/11 ಕೆ.ವಿ ಬೆಳ್ಳಾರೆ ವಿದ್ಯುತ್ ವಿತರಣಾ ಕೆಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡ ಹಿನ್ನೆಲೆ 11ಕೆವಿ ಬೆಳ್ಳಾರೆ -1, ಬೆಳ್ಳಾರೆ -2, ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ ಹಾಗೂ ಚೊಕ್ಕಾಡಿ ಫೀಡರ್ ಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ತನಕ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top