ಕಾರುಗಳ ನಡುವೆ ಅಪಘಾತ ➤ ಚಾಲಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಭಟ್ಕಳ, ಜು. 26. ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ, ಚಾಲಕರಿಬ್ಬರು ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಹೆಬಳೆ ಪಂಚಾಯತ್‌ ವ್ಯಾಪ್ತಿಯ ತೆಂಗಿನ ಗಂಡು ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಹೆಬಳೆ ಕಡೆಯಿಂದ ಭಟ್ಕಳಕ್ಕೆ ಹೋಗುತ್ತಿದ್ದ ಕಾರೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಚಾಲಕರಿಬ್ಬರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಗಾಯಾಳು ಕಾರು ಚಾಲಕರನ್ನು ಭಟ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top