ಮಾಣಿ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು



(ನ್ಯೂಸ್ ಕಡಬ) newskadaba.com ವಿಟ್ಲ, ಜು.27. ಬೈಕ್ ಹಾಗೂ ಮಾರುತಿ ಈಕೋ‌ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಮೃತಪಟ್ಟ ಘಟನೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.







ಮೃತ ಸವಾರನನ್ನು ಉತ್ತರ ಕರ್ನಾಟಕ ಮೂಲದ ಸುನಿಲ್ ಎಂದು ಗುರುತಿಸಲಾಗಿದೆ. ಸುನಿಲ್ ಬರಿಮಾರು ಎಂಬಲ್ಲಿನ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ವರ್ಷಗಳಿಂದ ಇಲ್ಲಿಯೇ ವಾಸವಾಗಿದ್ದರು ಎನ್ನಲಾಗಿದೆ. ಮಂಗಳವಾರ ರಾತ್ರಿ ಸುನಿಲ್ ಬೈಕಿನಲ್ಲಿ ಸೂರಿಕುಮೇರಿನಿಂದ ಬರಿಮಾರ್ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈಕೋ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಗಂಭೀರ ಗಾಯಗೊಂಡ ಸುನಿಲ್ ರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.






 

error: Content is protected !!
Scroll to Top