ರಾಜ್ಯ ಬಿಜೆಪಿ ನಾಯಕರ ವರ್ತನೆಗೆ ಬೇಸರ ➤ ರಾಜೀನಾಮೆಗೆ ಮುಂದಾದ ಕಡಬ ಬಿಜೆಪಿ ಶಕ್ತಿ ಕೇಂದ್ರದ ಮುಖಂಡರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು.27. ಬಿಜೆಪಿ ಯುವ ನಾಯಕ ಪ್ರವೀಣ್ ಹತ್ಯೆಯನ್ನು ಖಂಡಿಸಿ ರಾಜ್ಯ ಬಿಜೆಪಿಯ ವಿವಿಧ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿರುವುದರ ನಡುವೆಯೇ ಸುಳ್ಯ ಬಿಜೆಪಿಯಲ್ಲೂ ಹಲವು ಮುಖಂಡರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ರಾಜ್ಯ ಬಿಜೆಪಿ ನಾಯಕರ ಬೇಜವಾಬ್ದಾರಿ‌ಗಳಿಂದಾಗಿ ಪಕ್ಷದ ಕಾರ್ಯಕರ್ತರು ತಮ್ಮ ಜೀವವನ್ನು ಕಳೆದುಕೊಳ್ಳುತ್ತಿದ್ದು, ರಾಜ್ಯದ ವಿವಿಧೆಡೆ ಹಲವು ಮುಖಂಡರು ರಾಜೀನಾಮೆ ಘೋಷಿಸಿದ್ದಾರೆ. ರಾಜ್ಯ ನಾಯಕರ ವರ್ತನೆಯಿಂದ ಬೇಸತ್ತು ಕಡಬ ಮಹಾಶಕ್ತಿ ಕೇಂದ್ರದ ವಿವಿಧ ನಾಯಕರು ರಾಜಿನಾಮೆಗೆ ಮುಂದಾಗಿದ್ದು, ನಾಳೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

Also Read  ಬಂಟ್ವಾಳ : ಆಗಸ್ಟ್ 28 ರಂದು ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ

 

 

error: Content is protected !!