“ಪ್ರವೀಣ್ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದೇನೆ” ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತನ್ನ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಇಂದು ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕರ್ತನ ಸಾವು ಹಿನ್ನೆಲೆ ರದ್ದುಗೊಳಿಸಲಾಗಿದೆ. ಮೃತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುತ್ತೇನೆ ಎಂದರು. ಇದರ ನಡುವೆ ಇಂದು ಸಂಜೆ ಪ್ರವೀಣ್ ಮನೆಗೆ ಭೇಟಿ ನೀಡಲುದ್ದೇಶಿಸಿದ್ದ ಸಿಎಂ ಅವರಿಗೆ, ದ.ಕ. ಜಿಲ್ಲಾ ಭೇಟಿ ಸದ್ಯಕ್ಕೆ ಮುಂದೂಡುವುದು ಸೂಕ್ತ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸದ್ಯಕ್ಕೆ ಸುಳ್ಯಕ್ಕೆ ಭೇಟಿ ನೀಡದಿರುವುದೇ ಉತ್ತಮ ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಸಲಹೆ ನೀಡಿದ್ದಾರೆ.

Also Read  ಬೆಳ್ತಂಗಡಿ: ಕಲ್ಮಂಜ ಮನೆ ದರೋಡೆ ಯತ್ನ ಪ್ರಕರಣ

error: Content is protected !!
Scroll to Top