ಬೆಳ್ಳಾರೆ: ಹತ್ಯೇಗೀಡಾದ ಪ್ರವೀಣ್ ತಂದೆಯ ಆರೋಗ್ಯದಲ್ಲಿ ಏರುಪೇರು..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 28. ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ರವರ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಳ್ಳಾರೆಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಪುತ್ರ ಪ್ರವೀಣ್ ಸಾವಿನಿಂದ ಶೋಕದಲ್ಲಿರುವ ತಂದೆ ಶೇಖರ ಪೂಜಾರಿ ಅವರ ಹೃದಯ ಬಡಿತದಲ್ಲಿ ಏರುಪೇರಾಗಿದ್ದು ಈ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದೆನ್ನಲಾಗಿದೆ.

Scroll to Top