ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ದ.ಕ. ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ



(ನ್ಯೂಸ್ ಕಡಬ) newskadaba.com ಮಂಗಳೂರು, ಜು.28. ಪ್ರವೀಣ್ ಹತ್ಯೆಯ ಹಿನ್ನೆಲೆಯಲ್ಲಿ ಅಹಿತಕರ ಘಟನೆಯನ್ನು ತಡೆಯುವ ಸಲುವಾಗಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಪ್ರವೇಶಕ್ಕೆ ನಿಷೇಧ ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.







ಪ್ರಮೋದ್ ಮುತಾಲಿಕ್ ಭಾಷಣ ಮಾಡಿದ್ದಲ್ಲಿ ಜನತೆ ಪ್ರಚೋದನೆಗೊಂಡು ಅಹಿತಕರ ಘಟನೆ ನಡೆಯುವ ಸಂಭವವಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ಮುತಾಲಿಕ್ ಪ್ರವೇಶಕ್ಕೆ ಮುಂದಿನ ಆದೇಶದವರೆಗೆ ನಿರ್ಬಂಧ ಹೇರಲಾಗಿದೆ.






 

error: Content is protected !!
Scroll to Top