ಮಂಗಳೂರು: ಯುವಕನಿಗೆ ಚೂರಿ ಇರಿತ ➤ ಪ್ರವೀಣ್ ಕೊಲೆ ಬೆನ್ನಲ್ಲೇ ಮತ್ತೊಂದು ಪ್ರಕರಣ



(ನ್ಯೂಸ್ ಕಡಬ) newskadaba.com ಮಂಗಳೂರು, ಜು.28. ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಯ ಬೆನ್ನಲ್ಲೇ ಮಂಗಳೂರಿನಲ್ಲಿ ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.







ಸುರತ್ಕಲ್ ನಲ್ಲಿ ಚಪ್ಪಲಿ ಖರೀದಿಗೆಂದು ಬಂದಿದ್ದ ಮಂಗಲಪೇಟೆ ನಿವಾಸಿ ಫಾಝಿಲ್ ಎಂಬಾತನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದಿದ್ದು, ಗಂಭೀರ ಗಾಯಗೊಂಡ ಫಾಝಿಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.






 

error: Content is protected !!
Scroll to Top