ಮಂಗಳೂರು: ಮತ್ತೊಂದು ಮರ್ಡರ್ ➤ ದುಷ್ಕರ್ಮಿಗಳ ತಂಡದಿಂದ ಗಾಯಗೊಂಡಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು.28. ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಯ ಬೆನ್ನಲ್ಲೇ ಮಂಗಳೂರಿನಲ್ಲಿ ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಸುರತ್ಕಲ್ ನಲ್ಲಿ ಚಪ್ಪಲಿ ಖರೀದಿಗೆಂದು ಬಂದಿದ್ದ ಮಂಗಲಪೇಟೆ ನಿವಾಸಿ ಫಾಝಿಲ್ ಎಂಬಾತನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದಿದ್ದು, ಗಂಭೀರ ಗಾಯಗೊಂಡ ಫಾಝಿಲ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Also Read  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಸಜ್ಜಿತ ಆರೋಗ್ಯ ಕೇಂದ್ರ ಸ್ಥಾಪನೆಗೆ ಬೇಡಿಕೆ

 

error: Content is protected !!
Scroll to Top