ಕರಾವಳಿಯಲ್ಲಿ ನಡೆದ ಹತ್ಯೆಗೆ ಸಂಬಂಧಿಸಿ ಆಕ್ಷೇಪಾರ್ಹ ಪೋಸ್ಟ್ ರವಾನೆ ➤ 5 ಮಂದಿಯ ವಿರುದ್ಧ ಪ್ರಕರಣ ದಾಖಲು – ಸಾಮಾಜಿಕ ಜಾಲತಾಣದ ಮೇಲೆ ಪೊಲೀಸ್ ನಿಗಾ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮತ್ತು ಕಾಮೆಂಟ್‌ಗಳನ್ನು ಮಾಡಿರುವ ವ್ಯಕ್ತಿಗಳ ವಿರುದ್ಧ ಮಂಗಳೂರು ಸೆನ್ ಪೊಲೀಸರು 5 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಕರಾವಳಿಯಲ್ಲಿ ದೊಡ್ಡಮಟ್ಟದ ಕೋಮು ಸಂಘರ್ಷ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬುದಾಗಿ ರಾಜ್ಯ ಗುಪ್ತಚರ ದಳ ಮಾಹಿತಿ ನೀಡಿದೆ ಎಂಬ ಸುಳ್ಳು ಸಂದೇಶ ರವಾನೆ, ಪ್ರವೀಣ್‌ ಕೊಲೆಗೆ ಪ್ರತೀಕಾರವಾಗಿ ಕೊಲೆ ಮಾಡಲು ಕರೆ ನೀಡಿರುವ ಪೋಸ್ಟ್, ಸುರತ್ಕಲ್‌ನಲ್ಲಿ ನಡೆದಿರುವ ಫಾಝಿಲ್ ಕೊಲೆಗೆ ಪ್ರತೀಕಾರವಾಗಿ ಕೊಲೆ ಮಾಡುವುದಾಗಿ ಫೇಸ್‌ಬುಕ್ ಗ್ರೂಪ್‌ಗಳಲ್ಲಿ ಪೋಸ್ಟ್ ಹಾಕಿ ಚರ್ಚೆ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಯಬಿಡಲಾಗುತ್ತಿದ್ದು, ಅವುಗಳ ಮೇಲೆ ನಿಗಾ ವಹಿಸಲಾಗಿದೆ. ಆಕ್ಷೇಪಾರ್ಹ ಪೋಸ್ಟ್ ಹಾಕುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸೆನ್ ಪೊಲೀಸರು ತಿಳಿಸಿದ್ದಾರೆ.

Also Read  ಪುತ್ತೂರು: ಸ್ಕೂಟರ್ ಅಪಘಾತ- ಸವಾರ ಗಂಭೀರ

 

error: Content is protected !!
Scroll to Top