(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 01. ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಗರದಲ್ಲಿ ಇಬ್ಬರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.
ಪ್ರಕರಣದ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಿ ಹಲವರನ್ನು ವಿಚಾರಣೆ ನಡೆಸಲಾಗಿದ್ದು, ಇದೀಗ ಪ್ರವೀಣ್ ಕೊಲೆಗೆ ಸಹಕರಿಸಿದ್ದ ಆರೋಪದಡಿ ಇವರನ್ನು ವಶಕ್ಕೆ ಪಡೆಯಲಾಗಿದೆ. ಪ್ರವೀಣ್ ಹತ್ಯೆಯ ಬಳಿಕ ಇಬ್ಬರು ನಗರಕ್ಕೆ ಬಂದು ನೆಲೆಸಿದ್ದರು. ಈ ಬಗ್ಗೆ ಹಿರಿಯ ಐಪಿಎಸ್ ಅಧಿಕಾರಿಗೆ ಮಾಹಿತಿ ನೀಡಲಾಗಿತ್ತು. ಸುಳ್ಯ ಪೊಲೀಸರ ಜೊತೆಗೆ ನಗರದ ಒಂದು ಪೊಲೀಸ್ ತಂಡವು ಆರೋಪಿಗಳ ಪತ್ತೆಗೆ ಸಾಥ್ ನೀಡಿದ್ದು ಇಬ್ಬರನ್ನು ವಶಕ್ಕೆ ಪಡೆದು ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.