ಸರ್ಕಾರದ ದುರಾಡಳಿತದ ವಿರುಧ್ದ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಜೈಲಿಗಟ್ಟಿದ ಕೊಪ್ಪಳ ಪೋಲಿಸರ ನಡೆಯನ್ನು ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ➤ ಕ್ಯಾಂಪಸ್ ಫ್ರಂಟ್

(ನ್ಯೂಸ್ ಕಡಬ) newskadaba.com ಕೊಪ್ಪಳ, ಆ. 02. ರಾಜ್ಯ ಸರ್ಕಾರದ ದುರಾಡಳಿತ ಹಾಗೂ ತಾರತಮ್ಯ ಧೋರಣೆಯ ವಿರುದ್ಧ ಪ್ರತಿಭಟಿಸಿದ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯ ಚಾಂದ್ ಸಲ್ಮಾನ್ ಸೇರಿದಂತೆ ಕೊಪ್ಪಳ ಜಿಲ್ಲೆಯ ಕಾರ್ಯಕರ್ತರ ಬಂಧನವನ್ನು ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತಿದೆ.

ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರವು ಒಂದು ವರ್ಷದಿಂದ ದ್ವೇಷದ, ತಾರತಮ್ಯದ ಆಡಳಿತ ನಡೆಸುತ್ತಿದ್ದು ಇದನ್ನು ವಿರೋಧಿಸಿ ಸಂವಿಧಾನಾತ್ಮಕವಾಗಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಬಂಧನ ಮಾಡಿ ಹಿಂಸಿಸಿ ಜೈಲಿಗಟ್ಟಿದ ಕೊಪ್ಪಳ ಪೊಲೀಸರ ಕ್ರಮವನ್ನು ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆಯನ್ನು ನೀಡಿದ್ದು, ರಾಜ್ಯ ಸರ್ಕಾರದ ಈ ದ್ವೇಷ ಆಡಳಿತವನ್ನು ಬೀದಿ ಬೀದಿಗಳಲ್ಲಿ ವಿದ್ಯಾರ್ಥಿ ಸಮೂಹ ಇನ್ನೂ ಕೂಡ ಗಟ್ಟಿ ಧ್ವನಿಯಲ್ಲಿ ಪ್ರಶ್ನಿಸಲಿದ್ದಾರೆಯೆಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಟಿಕೆಟ್ ರಹಿತ ಪ್ರಯಾಣ - 2,832 ಪ್ರಯಾಣಿಕರಿಗೆ ದಂಡ ವಿಧಿಸಿದ ಕೆಎಸ್ಸಾರ್ಟಿಸಿ

error: Content is protected !!
Scroll to Top