ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಮಳೆ ➤ ಪರಿಹಾರ, ರಕ್ಷಣಾ ಕಾರ್ಯಗಳಿಗೆ ಕ್ರಮ- ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 02. ರಾಜ್ಯದ ಹಲವಾರು ಭಾಗದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನೆಲೆ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.


ಈ ಕುರಿತು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವೆಡೆ ಹಾಗೂ ಕರಾವಳಿಯಲ್ಲಿ ಪುನಃ ಮಳೆಯಾಗುತ್ತಿದ್ದು, ಇದರಿಂದ ಹಲವಾರು ಸಾವು ನೋವುಗಳಾಗಿವೆ. ಈ ಬಗ್ಗೆ ಇಂದು ಸಭೆ ನಡೆಸಲಾಗುವುದು. ಹೆಚ್ಚು ಮಳೆಯಾಗಿರುವ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಅಲ್ಲದೇ ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿರುವ ಮಂಕಿಫಾಕ್ಸ್ ನಿಯಂತ್ರಿಸುವ ಬಗ್ಗೆಯೂ ಸಭೆ ನಡೆಸಲಾಗುವುದು ಎಂದರು.

Also Read  ವಿಧಾನಪರಿಷತ್ ಚುನಾವಣೆ ➤ ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಗೆಲುವು

error: Content is protected !!
Scroll to Top