ಕರಾವಳಿಯಲ್ಲಿ ಮತ್ತೆ 2 ದಿನಗಳ ಕಾಲ ನಿಷೇಧಾಜ್ಞೆ ಮುಂದುವರಿಕೆ ➤ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 02. ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆ.3ಮತ್ತು 4ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಹಿನ್ನೆಲೆ ಆ.5ರ ಬೆಳಗ್ಗೆ 6ವರೆಗೆ ನಿರ್ಬಂಧ ಮುಂದುವರಿಯಲಿದೆ.

ಇತ್ತೀಚಿಗೆ ಬೆಳ್ಳಾರೆ ಮತ್ತು ‌ಸುರತ್ಕಲ್‌ನಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಂಜೆ 6ರಿಂದ ಮುಂಜಾನೆ 6ರವರೆಗೆ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ‌ ನಿರ್ಬಂಧ ಹೇರಲಾಗಿತ್ತು.

Also Read  ಡಿ.11 ರಿಂದ 13 ರವರೆಗೆ ಸ್ವಯಂ ಘೋಷಿತ ಆಸ್ತಿ ತೆರಿಗೆ ವಸೂಲಾತಿ ಅಭಿಯಾನ-2019-ಕಾರ್ಯಕ್ರಮ

error: Content is protected !!
Scroll to Top