ಶಿರಾಡಿ: ಕಾರು ಹಾಗೂ ಬಸ್ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ



(ನ್ಯೂಸ್ ಕಡಬ) newskadaba.com ಶಿರಾಡಿ, ಆ. 03. ಕಾರು ಮತ್ತು ಬಸ್‌ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.








ಗಾಯಗೊಂಡವರನ್ನು ಕಡಬ ತಾಲೂಕಿನ ರಾಮಕುಂಜ ನಿವಾಸಿಗಳಾದ ಉಪನ್ಯಾಸಕ ಗೋವಿಂದರಾಜ್‌ ಶರ್ಮಾ ಮತ್ತು ಓಂಕಾರ್‌ ಪ್ರಸಾದ್‌ ಎಂದು ಗುರುತಿಸಲಾಗಿದೆ. ಇವರು ಸಕಲೇಶಪುರದಿಂದ ರಾಮಕುಂಜಕ್ಕೆ ಕಾರಿನಲ್ಲಿ ಬರುತ್ತಿದ್ದ ಕಾರು ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರ ಕಾಲು ಮತ್ತು ತಲೆಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನೂ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.






error: Content is protected !!
Scroll to Top