ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ➤ ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 03. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ರಸ್ತೆ ಬದಿಗೆ ಉರುಳಿಬಿದ್ದ ಘಟನೆ ಇಲ್ಲಿ‌ನ ಬನ್ನಡ್ಕದ ರಾಘವೇಂದ್ರ ಮಠದ ಬಳಿ ಬುಧವಾರ ಬೆಳಗ್ಗೆ ನಡೆದಿದೆ.


ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗಕ್ಕೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಪಿಯಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Also Read   ವಿದ್ಯಾರ್ಥಿವೇತನ ಮುಂದುವರಿಸಲು ಪ್ರತಿಭಟನೆ

error: Content is protected !!