ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ ➤ ದನ ಹಾಗೂ ಪಿಕಪ್ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.03. ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿರುವ ಕಡಬ ಪೊಲೀಸರು ಒಂದು ಜಾನುವಾರು ಸಹಿತ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡ ಘಟನೆ ಕೊಯಿಲ ಗ್ರಾಮದ ಆನೆಗುಂಡಿ ಎಂಬಲ್ಲಿ ಬುಧವಾರದಂದು ನಡೆದಿದೆ.

ನಝೀರ್ ಹಾಗೂ ರತ್ನಾಕರ ಎಂಬವರು ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿಯವರು ಆನೆಗುಂಡಿ ಸಮೀಪ ವಾಹನವನ್ನು ನಿಲ್ಲಿಸಲು ಸೂಚಿಸಿದರೂ, ನಿಲ್ಲಿಸದೆ ಪರಾರಿಯಾಗಲೆತ್ನಿಸಿದ ಪಿಕಪ್ ವಾಹನವನ್ನು ಬೆನ್ನಟ್ಟಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top