ಕಾರಿಗೆ ಲಾರಿ ಢಿಕ್ಕಿ ➤ ವಿದ್ಯಾರ್ಥಿನಿಗೆ ಗಾಯ



(ನ್ಯೂಸ್ ಕಡಬ) newskadaba.com ಉಡುಪಿ, ಆ. 04. ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ವಿದ್ಯಾರ್ಥಿನಿಯೋರ್ವಳು ಗಾಯಗೊಂಡ ಘಟನೆ ಉಡುಪಿಯ ಸಂತೆಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ.







ಗಾಯಗೊಂಡ ಮಣಿಪಾಲದ ಎಂಐಟಿ ವಿದ್ಯಾರ್ಥಿನಿ‌ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯಾರ್ಥಿನಿ ಗಾಯಗೊಂಡಿದ್ದು, ತಕ್ಷಣವೇ ಮಲ್ಪೆಯ ಅಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ಸ್ನೇಹಿತರು ವಿದ್ಯಾರ್ಥಿನಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top