(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ದ.ಕ. ಜಿಲ್ಲೆಯಾದ್ಯಂತ ಅಹಿತಕರ ಘಟನೆ ನಡೆಯುತ್ತಿರುವ ಹಿನ್ನೆಲೆ ವಿಧಿಸಲಾಗಿದ್ದ ಸಂಜೆ 6ರಿಂದ ಬೆಳಗ್ಗೆ 6ರವರೆಗಿನ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ.
ಆಗಸ್ಟ್ 5ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮೂರು ದಿನಗಳ ಕಾಲ ಈ ನಿರ್ಬಂಧ ವಿಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿದ್ದಾರೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಈ ದಿನಗಳಲ್ಲಿ ರಾತ್ರಿ 9 ಗಂಟೆಯಿಂದ ಅಂಗಡಿ ಮುಂಗಟ್ಟುಗಳು ಮುಚ್ಚಲಿವೆ. ಆ. 5ರಿಂದ ಮದ್ಯದಂಗಡಿಗಳು ಸಂಜೆ 6 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಉಳಿದಂತೆ ಸೆಕ್ಷನ್ 144 ಈ ಹಿಂದಿನಂತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.