ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಮಾತ್ರ ನಿರ್ಬಂಧ ➤ ಬೆಳ್ಳಾರೆಯಲ್ಲಿ ಸ್ಪಷ್ಟನೆ ನೀಡಿದ ಎಡಿಜಿಪಿ ಅಲೋಕ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 04. ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂಬ ವರದಿಗೆ ಬೆಳ್ಳಾರೆಯಲ್ಲಿ ಸ್ಪಷ್ಟನೆ ನೀಡಿರುವ ಎಡಿಜಿಪಿ ಅಲೋಕ್ ಕುಮಾರ್‌, ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರನಿಗೆ ನಿಷೇಧ ಹೇರಿರುವಂಥದ್ದು ಕೇವಲ ಸಂಜೆ ಆರು ಗಂಟೆಯಿಂದ ಬೆಳಗಿನ ಜಾವ ಆರರವರೆಗೆ ಮಾತ್ರ ಎಂದಿದ್ದಾರೆ.

ಅವರು ಇಂದು ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಳಿಕ ಈ ವಿಷಯ ತಿಳಿಸಿದರು. ಇತ್ತೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಪರಾಧ ಘಟನೆಗಳನ್ನು ಗಣನೆಗೆ ತೆಗೆದುಕೊಂಡು ಅಪರಾಧಗಳನ್ನು ತಡೆಗಟ್ಟುವ ಉದ್ದೇಶಕ್ಕಾಗಿ ಈ ರೀತಿಯ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮಹಿಳೆಯರಿಗೆ, ಮಕ್ಕಳಿಗೆ ಹಾಗೂ ವೃದ್ಧರಿಗೆ ಅನ್ವಯವಾಗುವುದಿಲ್ಲ. ಒಂದು ವಾರದವರೆಗೆ ಈ ನಿರ್ಬಂಧ ಇರಲಿದೆ, ಸಾರ್ವಜನಿಕರು ಸಹಕರಿಸುವಂತೆ ಕೇಳಿಕೊಂಡರು.

Also Read  ➤ ವಿಶೇಷ ಲೇಖನ ಕೋವಿಡ್-19 ಕಟು ಸತ್ಯಗಳು ✍? ಡಾ|| ಮುರಲೀ ಮೋಹನ್ ಚೂಂತಾರು

error: Content is protected !!
Scroll to Top