ಮಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ದೆ ನದಿಗೆ ಹಾರಿ ಆತ್ಮಹತ್ಯೆ



(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ದೆಯೋರ್ವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.








ಆತ್ಮಹತ್ಯೆ ಮಾಡಿಕೊಂಡವರನ್ನು ಹಳೆಯಂಗಡಿ ಲೈಟ್ ಹೌಸ್ ನಿವಾಸಿ ನರ್ಸಿ(70) ಎಂದು ಗುರುತಿಸಲಾಗಿದೆ. ಇವರು ಕಳೆದ ಕೆಲವು ತಿಂಗಳುಗಳಿಂದ ಈಚೆಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ಮುಲ್ಕಿ ಪೊಲೀಸರಿಗೆ ದೂರು ನೀಡಿದ್ದಾರೆ. ನರ್ಸಿ ಅವರು ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ.






error: Content is protected !!
Scroll to Top