ಕರ್ತವ್ಯದಲ್ಲಿದ್ದ ವೇಳೆ ದಿಢೀರ್ ಅಸ್ವಸ್ಥ ➤ ಕೊಣಾಜೆ ಠಾಣಾ ಹೆಡ್ ಕಾನ್ಸ್ಟೇಬಲ್, ಸವಣೂರು ಮೂಲದ ಜಗನ್ನಾಥ್ ನಿಧನ

(ನ್ಯೂಸ್ ಕಡಬ) newskadaba.com ಕೊಣಾಜೆ, ಆ. 06. ಕೋಣಾಜೆ ಠಾಣೆಯಲ್ಲಿ ಕರ್ತವ್ಯನಿರತರಾಗಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಅಸ್ಪಸ್ಧಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.


ಮೃತರನ್ನು ಸವಣೂರಿನ ಜಗನ್ನಾಥ (44) ಎಂದು ಗುರುತಿಸಲಾಗಿದೆ. ಇವರು ಕರ್ತವ್ಯದಲ್ಲಿದ್ದ ವೇಳೆ ದಿಢೀರ್ ಅಸ್ಪಸ್ಧಗೊಂಡಿದ್ದು, ತಕ್ಷಣವೇ ಕಣಚೂರು ಆಸ್ಫತ್ರೆಗೆ ದಾಖಲಿಸಿದ್ದು, ಆದರೆ ಚಿಕೆತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

error: Content is protected !!
Scroll to Top