(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 06. ಕೇರಳದಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಈ ಸಂದರ್ಭ ಮಹಿಳೆಯೊಬ್ಬರು ಕಾಡಿನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ವರದಿಯಾಗಿದೆ.
ಮಳೆಯಿಂದಾಗಿ 2 ಸಾವಿರಕ್ಕೂ ಅಧಿಕ ಮಂದಿಯನ್ನು ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ಇನ್ನು ಇದೇ ವೇಳೆ ಮಹಿಳೆಯೊಬ್ಬರು ಕಾಡಿನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.