ನೇತ್ರಾವತಿ ನದಿಗೆ ಬಿದ್ದು ಗಂಭೀರಾವಸ್ಥೆಯಲ್ಲಿದ್ದ ಯುವಕ ಮೃತ್ಯು



(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 10. ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.







ಮೃತ ವಿದ್ಯಾರ್ಥಿಯನ್ನು ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್ (16) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜಿಗೆ ರಜೆ ಇದ್ದ ಹಿನ್ನೆಲೆ ನೇತ್ರಾವತಿ ನದಿ ಬಳಿಗೆ ಹೋಗಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದಿದ್ದ. ತಕ್ಷಣವೇ ಸ್ಥಳೀಯರು ಮತ್ತು ಅಗ್ನಿಶಾಮಕದಳದವರು ವಿದ್ಯಾರ್ಥಿಯನ್ನು ಮೇಲಕ್ಕೆತ್ತಿದ್ದು , ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ತುಂಬೆ ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.






error: Content is protected !!
Scroll to Top