ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಪತ್ತೆಗೆ ಕ್ರಮ: ಎಡಿಜಿಪಿ ಅಲೋಕ್ ಕುಮಾರ್ ➤‌ ಆಸ್ತಿ ಮುಟ್ಟುಗೋಲಿಗೆ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 10. ಬಿಜೆಪಿ ಯುವಮುಖಂಡ ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7 ಜನರನ್ನು ಬಂಧಿಸಲಾಗಿದೆ. ಇನ್ನುಳಿದ ಮೂವರು ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಲು ಬೇರೆ ಬೇರೆ ಜಿಲ್ಲೆಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಬುಧವಾರ ಹೇಳಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಾರಿಯಾದ ಮೂವರು ಆರೋಪಿಗಳ ಫೋಟೋ, ಮನೆ ವಿಳಾಸ, ಮನೆಯವರ ಬಗ್ಗೆ ತಿಳಿದಿದೆ. ಆದರೆ ಆರೋಪಿಗಳನ್ನು ಕೆಲವರು ಸೇರಿ ಬಚ್ಚಿಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ ನೀಡಿದವರು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದವರ ಮೇಲೂ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾರೆಲ್ಲಾ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅವರೆಲ್ಲರ ಮೇಲೆ ಕರ್ನಾಟಕ ಪೊಲೀಸ್‌ ಹಾಗೂ ಎನ್‌ಐಎ ಮೂಲಕ ಕ್ರಮ ಜರುಗಿಸುತ್ತೇವೆ. ಪರಾರಿಯಾದ ಆರೋಪಿಗಳನ್ನು ಪತ್ತೆಹಚ್ಚಲು ಕೋರ್ಟ್‌ ಮುಖಾಂತರ ವಾರೆಂಟ್‌ ಪಡೆದು ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

Also Read  ಮಂಡ್ಯ: ರಾಷ್ಟ್ರ ಪಕ್ಷಿ ನವಿಲು ಸಾವು ➤ ಗಂಟೆಗಳು ಕಳೆದರೂ ಸ್ಥಳಕ್ಕಾಗಮಿಸದ ಅರಣ್ಯ ಅಧಿಕಾರಿಗಳು

error: Content is protected !!
Scroll to Top