ಸುಳ್ಯ: ತಲವಾರು ಹಿಡಿದು ಸುತ್ತಾಡಿದ ಯುವಕ ಅರೆಸ್ಟ್.!

(ನ್ಯೂಸ್ ಕಡಬ) newskadaba.com ಸುಳ್ಯ, ಆ. 10. ತಲ್ವಾರು ಹಿಡಿದು ಊರಿಡೀ ಹುಚ್ಚಾಟ ಮೆರೆದ ಕನಕಮಜಲು ನಿವಾಸಿ ಸಂದೀಪ್ ಎಂಬಾತನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಈತ ತಲವಾರು ಹಿಡಿದುಕೊಂಡು ಓಡಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀರ ಸಂದೀಪ್ ನನ್ನು ಬಂಧಿಸಿದ ಸುಳ್ಯ ಪೊಲೀಸರು, ಆತನ ವಿರುದ್ದ ಸುಮೊಟೋ ಪ್ರಕರಣ ದಾಖಲಿಸಿದ್ದಾರೆ. ಸಂದೀಪ್ ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದು, ಮಾನಸಿಕ ಸ್ಥಿರತೆ ಕಳೆದುಕೊಂಡು ಈ ರೀತಿ ವರ್ತಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಗಂಭೀರತೆ ಅರಿತ ಪೊಲೀಸರು ಸ್ಥಳಕ್ಕೆ ತೆರಳಿ ತಲವಾರು ವಶಪಡಿಸಿಕೊಂಡಿದ್ದಾರೆ.

Scroll to Top