ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಅಪರಿಚಿತ ಓಮ್ನಿ ಕಾರು ಪತ್ತೆ ➤‌ ಕಡಬ ಪೊಲೀಸರಿಂದ ಕಾರಿಗೆ ಲಾಕ್

(ನ್ಯೂಸ್ ಕಡಬ) newskadaba.com ಕಡಬ, ಆ.11. ಎರಡು ನಂಬರ್ ಪ್ಲೇಟ್ ಹೊಂದಿರುವ ಅಪರಿಚಿತ ಕಾರೊಂದು ಮರ್ಧಾಳದಲ್ಲಿ ಕಂಡುಬಂದಿದ್ದು, ಪೊಲೀಸರು ಲಾಕ್ ಮಾಡಿದ್ದಾರೆ.

ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಬೇರೆ ಬೇರೆ ನಕಲಿ ನಂಬರ್ ಪ್ಲೇಟ್ ಗಳನ್ನು ಹಾಕಲಾಗಿದ್ದು, ಬುಧವಾರ ರಾತ್ರಿ ಕಡಬ ಠಾಣಾ ಪೊಲೀಸರು ಮರ್ಧಾಳ ಜಂಕ್ಷನ್ ನಲ್ಲಿ ಕಾರಿನ ಚಕ್ರಗಳಿಗೆ ಲಾಕ್ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ, ನಕಲಿ ನಂಬರ್ ಪ್ಲೇಟ್ ಹಾಕಿರುವ ಕಾರಿಗೆ ಲಾಕ್ ಮಾಡಲಾಗಿದ್ದು, ಕಾರಿನ ಮಾಲಕರನ್ನು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Also Read  ಮೂಡುಬಿದಿರೆ: ಬಿಜೆಪಿ ಅಭ್ಯರ್ಥಿ 20 ಸಾವಿರ ಮತಗಳ ಅಂತರದಿಂದ ಭರ್ಜರಿ ಮುನ್ನಡೆ

 

error: Content is protected !!
Scroll to Top