ಮಂಗಳೂರು: ಹಲ್ಲೆ ಪ್ರಕರಣ ➤‌ ತಂದೆ, ಮಗ ಅರೆಸ್ಟ್



(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಬೋಳೂರು ಜಾರಂದಾಯ ದೇವಸ್ಥಾನದ ಬಳಿ ಮಂಗಳವಾರ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ತಂದೆ ಹಾಗೂ ಮಗನನ್ನು ಪೊಲೀಸರು ಬಂಧಿಸಿದ್ದಾರೆ.







ಬಂಧಿತರನ್ನು ದೇವದಾಸ್ ಬೋಳೂರು (61) ಮಗ ಸಾಯಿ ಕಿರಣ್ (21) ಎಂದು ಗುರುತಿಸಲಾಗಿದೆ. ಗಾಯಗೊಂಡ ನವೀನ್ ಸಾಲ್ಯಾನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನವೀನ್ ಸಾಲ್ಯಾನ್ ರ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಗಿದ್ದು, ಹಲ್ಲೆಗೆ ಹಳೆಯ ದ್ವೇಷವೇ ಕಾರಣ ಎಂದು ತಿಳಿದು ಬಂದಿದೆ.






error: Content is protected !!
Scroll to Top