(ನ್ಯೂಸ್ ಕಡಬ) newskadaba.com ಸುಳ್ಯ, ಆ. 17. ಹಟ ಮಾಡುತ್ತಿದ್ದ ನಾಲ್ಕು ವರ್ಷ ಪ್ರಾಯದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ದಾರುಣ ಘಟನೆ ಸುಳ್ಯದ ನಾವೂರಿನಲ್ಲಿ ನಡೆದಿದೆ.
ಆರು ದಿನಗಳ ಹಿಂದೆ ಈ ಘಟನೆ ನಡೆದಿದೆಯೆನ್ನಲಾಗಿದ್ದು, ಸ್ಥಳೀಯರು ನೀಡಿದ ಮಾಹಿತಿಯನುಸಾರ ಸಿ.ಡಿ.ಪಿ.ಒ. ರಶ್ಮಿ ನೆಕ್ರಾಜೆಯವರು ಮನೆಗೆ ಧಾವಿಸಿ ಪರಿಶೀಲಿಸಿ ಬಳಿಕ ಮಗುವನ್ನು ಸಿ.ಡಿ.ಪಿ.ಒ. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತೆಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.