ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤‌ ಐವರು ಆರೋಪಿಗಳು ಎನ್ಐಎ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಕಸ್ಟಡಿಗೆ ಪಡೆದುಕೊಂಡಿದೆ.


ಐವರು ಆರೋಪಿಗಳಾದ ರಿಯಾಜ್ (27), ನೌಫಲ್ (28), ಝೈನುಲ್ ಅಬಿದ್ (22), ಮೊಹಮ್ಮದ್ ಸೈಯದ್ (32) ಹಾಗೂ ಅಬ್ದುಲ್ ಬಶೀರ್ (29) ರನ್ನು ಎನ್‌ಐಎ ಆರು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 27ರಂದು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡು, ಗುರುವಾರದಂದು ಐವರು ಆರೋಪಿಗಳನ್ನು ಆರು ದಿನಗಳ ಕಾಲ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

Scroll to Top