(ನ್ಯೂಸ್ ಕಡಬ) newskadaba.com ಪುತ್ತೂರು, ಆ. 21. ನಗರಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅರುಣ್ ಕುಮಾರ್ ಅವರು ವಿಷ ಸೇವಿಸಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಸ್ಮಶಾನದ ಬಳಿಯಲ್ಲಿ ಅವರು ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಾಗ ವಿಷ ಪದಾರ್ಥ ಸೇವಿಸಿರುವುದು ತಿಳಿದು ಬಂದಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.