ಸೆ. 02ರಂದು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಸೆ. 02ರಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸಲಿದ್ದು, ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.


ನವ ಮಂಗಳೂರು ಬಂದರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗಲಿದ್ದು, ಇದೇ ವೇಳೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೂ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಕಾರ್ಯಕ್ರಮಗಳ ಕುರಿತು ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ.

error: Content is protected !!

Join the Group

Join WhatsApp Group