ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ➤‌ ಸಹಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನದ ಸಹ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ನಡೆದಿದೆ.

ಮೃತರನ್ನು ಮಂಕುಡೆ ಅಮೈ ನಿವಾಸಿ ಸಂಜೀವ ಶೇಖರ ಪುತ್ರ ವಿಕಲಚೇತನರಾಗಿದ್ದ ಚಂದ್ರಹಾಸ ಶೇಖ (50) ಎಂದು ಗುರುತಿಸಲಾಗಿದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನದ ಸಹ ಸವಾರ ವಿಕಲಚೇತನರಾದ ಚಂದ್ರಹಾಸ ಶೇಖ ರವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Also Read  ಪ್ರವಾಹ ಪೀಡಿತ ಪ್ರದೇಶಗಳಿಗೆ 5858.60 ಕೋಟಿ ಪರಿಹಾರ

error: Content is protected !!