(ನ್ಯೂಸ್ ಕಡಬ) newskadaba.com ಸುಳ್ಯ, ಆ. 23. ಕಾರು ಹಾಗೂ ಲಾರಿ ಮಧ್ಯೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಕನಕಮಜಲು ಗ್ರಾಮದ ಕೋಡಿ ಎಂಬಲ್ಲಿ ಸಂಭವಿಸಿದೆ.
ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು ಕನಕಮಜಲಿನ ಕೋಡಿ ಎಂಬಲ್ಲಿ ತಿರುವಿನ ಬಳಿ ತಲುಪುತ್ತಿದ್ದಂತೆಯೇ ವಿರುದ್ದ ದಿಕ್ಕಿನಿಂದ ಬಂದ ಲಾರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಕಾರು ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಗಾಯಾಳುವನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.