ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ➤‌ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 23. ಕಾರು ಹಾಗು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಮಿತ್ತೂರು ಸಮೀಪ‌ ಆ. 23ರಂದು ನಡೆದಿದೆ.

ಗಾಯಗೊಂಡವರನ್ನು ಕೋಲ್ಪೆ ಸಮೀಪದ ಸೂರ್ಯ ನಿವಾಸಿ ವಾಸಪ್ಪ ಸಪಲ್ಯ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

Scroll to Top