ವಿಟ್ಲ: ಹಠಾತ್ತನೆ ಕುಸಿದುಬಿದ್ದು ವ್ಯಕ್ತಿ ಮೃತ್ಯು



(ನ್ಯೂಸ್ ಕಡಬ) newskadaba.com ವಿಟ್ಲ, ಆ. 23. ಹಠಾತ್ತನೆ ಕುಸಿದು ಬಿದ್ದು ವ್ಯಕ್ತಿಯೋರ್ವರ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.








ಮೃತ ವ್ಯಕ್ತಿಯನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರಿನಲ್ಲಿ ವಾಸವಿರುವ ಮೊಯ್ದೀನ್ ಎಂದು ಗುರುತಿಸಲಾಗಿದೆ. ಇವರು ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿನ ರಿಕ್ಷಾ ಪಾರ್ಕಿಂಗ್ ಬಳಿ ಹಠಾತ್ ಕುಸಿದು ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.






error: Content is protected !!
Scroll to Top