ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 25. ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗಾಂಧಿನಗರ ಕಾಫಿನಡ್ಕ ನಿವಾಸಿ ರಮಾನಂದ(42) ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದ ಬಾವಿಗೆ ನಿನ್ನೆ ಮಧ್ಯಾಹ್ನ ಆಕಸ್ಮಿಕವಾಗಿ ಬಿದ್ದಿದ್ದು, ಸಂಜೆವರೆಗೂ ಇವರನ್ನು ಕಾಣದೇ ಇದ್ದಾಗ ಆತಂಕಗೊಂಡು ಮನೆಯವರು ಹುಡುಕಾಡಿದಾಗ ರಾತ್ರಿ ವೇಳೆ ರಮಾನಂದರ ಚಪ್ಪಲಿ ಬಾವಿ ಸಮೀಪ ಸಿಕ್ಕಿದೆ. ತಕ್ಷಣವೇ ಗ್ರಾ.ಪಂ. ಅಧ್ಯಕ್ಷರಾದ ಹೇಮಂತ್ ರವರು ಬೆಳ್ತಂಗಡಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಅಗ್ನಿಶಾಮಕದಳವು ಮೃತದೇಹವನ್ನು ಮೇಲಕ್ಕೆತ್ತಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group