ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ➤‌ 9 ಮಂದಿ ದುರ್ಮರಣ



(ನ್ಯೂಸ್ ಕಡಬ) newskadaba.com ತುಮಕೂರು, ಆ. 25. ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 9 ಜನರು ಸ್ಥಳದಲ್ಲೇ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ.







ರಾಯಚೂರು ಮತ್ತು ಮಾನ್ವಿ ಮೂಲದ ಜನರು ಕೂಲಿಗೆಂದು ಅರಸಿ ಕ್ರೂಸರ್ ವಾಹನದಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಲಾರಿ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ ಒಂಬತ್ತು ಜನ ಸಾವನ್ನಪ್ಪಿ, ಹಲವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.






error: Content is protected !!
Scroll to Top