(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 25. ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ತಾಯಿ- ಮಗ ಗಾಯಗೊಂಡ ಘಟನೆ ಕಾಂಚನ – ಶಾಂತಿನಗರ ರಸ್ತೆಯ ಗೋಳಿತ್ತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ನೂಜೋಲು ನಿವಾಸಿ ಕುಶಾಲಪ್ಪ ಹಾಗೂ ಅವರ ತಾಯಿ ಉಪ್ಪಿನಂಗಡಿಯಿಂದ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಟಿಪ್ಪರ್ ಅಡಿಗೆ ಬಿದ್ದಿದ್ದ ಕುಶಾಲಪ್ಪ ಹಾಗೂ ಅವರ ತಾಯಿಯನ್ನು ಕಷ್ಟಪಟ್ಟು ಹೊರ ತೆಗೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Also Read ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ