ಹಿಜಾಬ್ ವಿವಾದ- ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ➤‌ ಅರ್ಜಿ ವಿಚಾರಣೆ ಸೆ. 05ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 29. ಕರ್ನಾಟಕ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರದಂದು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಕೆಲವು ಮೇಲ್ಮನವಿದಾರರ ಮುಂದೂಡಿಕೆ ಕೋರಿಕೆಯನ್ನು ನಿರಾಕರಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿದೆ. ಹಿಜಾಬ್ ಧರಿಸುವುದು ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ರಕ್ಷಿಸಬಹುದಾದ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ.

Also Read  ಆಟವಾಡುತ್ತಿದ್ದ ವೇಳೆ‌ ಮೊಬೈಲ್ ಬ್ಯಾಟರಿ‌ ಸ್ಫೋಟ ➤ ಬಾಲಕ ಗಂಭೀರ

error: Content is protected !!
Scroll to Top