(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಮೂರು ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಕಲ್ಲಾಪಿನಲ್ಲಿ ಇಂದು ರಾತ್ರಿ ನಡೆದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.










