(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವೊಂದು ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಕ್ಕದ ಸೇತುವೆ ಬಳಿ ಪಯಸ್ವಿನಿ ನದಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.

ಶರ್ಟ್ ಹಾಗೂ ಪ್ಯಾಂಟ್ ಧರಿಸಿರುವ ಅಪರಿಚಿತ ವ್ಯಕ್ತಿಯ
ಮೃತದೇಹವು ಪಯಸ್ವಿನಿ ನದಿಯ ಹಳೆ ಸೇತುವೆಯ ಕಂಬದ ಬಳಿ ಮರದಲ್ಲಿ ಸಿಲುಕಿಕೊಂಡಿದ್ದು, ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










